ಶಿವಮೊಗ್ಗ ಜಿಲ್ಲೆಯಲ್ಲಿ ಅನಾನಸ್ ಮತ್ತಿತರೆ ತೋಟಗಾರಿಕೆ ಬೆಳೆಗಳು ನಾಶವಾಗುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.

Date: 07.04.2020

ಶಿವಮೊಗ್ಗ ಜಿಲ್ಲೆಯಲ್ಲಿ ಅನಾನಸ್ ಮತ್ತಿತರೆ ತೋಟಗಾರಿಕೆ ಬೆಳೆಗಳು ನಾಶವಾಗುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.

ಶಿವಮೊಗ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಪೈಕಿ ಪ್ರಮುಖವಾಗಿ ಸೊರಬ, ಸಾಗರ ತಾಲ್ಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಾವಿರಾರು ರೈತರು ಲಕ್ಷಾಂತರ ಟನ್ ಅನಾನಸ್ ಬೆಳೆಯನ್ನು ಬೆಳೆದಿದ್ದು, ಕೊವೀಡ್ ಲಾಕ್ ಡೌನ್ ನಿಂದಾಗಿ ಕಟಾವಿಗೆ ಬಂದಿರುವ ಮೊದಲ ಹಂತದ ಅನಾನಸ್ ಬೆಳೆಗೆ ಸೂಕ್ತ ಮಾರುಕಟ್ಟೆ ಸೌಲಭ್ಯವಿಲ್ಲದೇ ಹಾಳಾಗುತ್ತಿರುವುದರ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ತೋಟಗಾರಿಕೆ ಉಪ ನಿರ್ದೇಶಕರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

ಈ ಬಗ್ಗೆ ಜಿಲ್ಲಾಡಳಿತ ವತಿಯಿಂದ ಕಟಾವಿಗೆ ಬಂದಿರುವ ಅನಾನಸ್ ಬೆಳೆಯನ್ನು ಯಾವ ರೀತಿ ವಿಲೇವಾರಿ ಮಾಡಬಹುದೆಂಬುದರ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಯಿತು.



Leave a Reply