- March 15, 2022
- Posted by: BYadmin
- Category: Latest Events, News & Events
No Comments


ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರು ಏಪ್ರಿಲ್ 24ರಂದು ಶಿವಮೊಗ್ಗದ ಹೊಳಲೂರಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ನಂತರ ಸಚಿವರು ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಕಾರ್ಯಕ್ರಮಕ್ಕಾಗಿ ನಿಗದಿಪಡಿಸಿರುವ ಸ್ಥಳವನ್ನು ವೀಕ್ಷಿಸಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪನವರು, ಸರ್ಕಾರದ ಆಪ್ತ ಮುಖ್ಯ ಕಾರ್ಯದರ್ಶಿ ಶ್ರೀ ಎಲ್. ಕೆ. ವಿವೇಕ್, RDPR ಆಯುಕ್ತರಾದ ಶ್ರೀಮತಿ ಶಿಲ್ಪಾ ನಾಗ್, KRIDL ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ , ಪೊಲೀಸ್ ಅಧೀಕ್ಷಕರಾದ ಬಿ. ಎಂ. ಲಕ್ಷ್ಮಿ ಪ್ರಸಾದ್. ಸಿ.ಇ.ಓ.ವೈಶಾಲಿ, ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.