- April 10, 2022
- Posted by: BYadmin
- Category: Latest Events, News & Events
No Comments
ಬೆಂಗಳೂರಿನಲ್ಲಿ ವಾಸಿಸುತ್ತಿರುವ ತೀರ್ಥಹಳ್ಳಿ ಕ್ಷೇತ್ರದ ಮಲೆನಾಡಿಗರ ‘ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದು, ನಿಕಟ ಪೂರ್ವ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರೊಂದಿಗೆ ಈ ಸಮಾರಂಭವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಶಾಸಕರಾದ ಶ್ರೀ ಹಾಲಪ್ಪ, ಶ್ರೀ ಕುಮಾರ ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಡಿ. ಎನ್.ಜೀವರಾಜ ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು.