ಶ್ರೀ ಶನೈಶ್ವರ ದೇವಾಲಯದ ಗರ್ಭಗುಡಿಗೆ ಕವಚ ಸಮರ್ಪಣೆ

ಶಿವಮೊಗ್ಗದ ಶ್ರೀ ಶನೈಶ್ಚರ ದೇವಾಲಯ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಶನೈಶ್ವರ ದೇವಾಲಯದ ಗರ್ಭಗುಡಿಗೆ ಕವಚ ಸಮರ್ಪಣೆ, ಶ್ರೀ ಯುಜು:ಸಂಹಿತಾ ಯಾಗ ಪೂರ್ಣಹುತಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಲಾಯಿತು.

ಶ್ರೀ ವೇದನಾರಾಯಣಾನುಗ್ರಹ ಪ್ರಶಸ್ತಿಯನ್ನು ರವೀಂದ್ರನಗರ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದ ಬ್ರಹ್ಮ ಶ್ರೀ ಅ.ಪ.ರಾಮಭಟ್ಟರಿಗೆ ಶ್ರೀಗಳ ಆಶೀರ್ವಾದದೊಂದಿಗೆ ಗಣ್ಯರು ಪ್ರಧಾನಿಸಿದರು.

ದಿವ್ಯ ಸಾನಿಧ್ಯವನ್ನು ಶ್ರೀ ಕ್ಷೇತ್ರ ಹರಿಹರಪುರ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠಾಧೀಶ್ವರರಾದ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳವರು, ಅಖಿಲ ಭಾರತ ಕುಟುಂಬ ಪ್ರಭೋದನದ ಕಜಂಪಾಡಿ ಸುಬ್ರಹ್ಮಣ್ಯ ಭಟ್, ಡಾ|| ಭೀಮೇಶ್ವರ ಜೋಷಿಯವರು ಧರ್ಮಾಧಿಕಾರಿಗಳು, ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ, ಶ್ರೀ ಕ್ಷೇತ್ರ ಹೊರನಾಡು, ದೇವಾಲಯ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಸ್. ಈಶ್ವರಪ್ಪನವರು, ಗೃಹ ಸಚಿವರಾದ ಮಾನ್ಯ ಆರಗ ಜ್ಞಾನೇಂದ್ರ ಅವರು, ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್.ಅರುಣ್, ಕಾಂತೇಶ್, ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ನಟರಾಜ್ ಭಾಗವತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Leave a Reply