ಪ್ರಗತಿ ಪರಿಶೀಲನೆ ಸಭೆ

ದಿನಾಂಕ: 23.07.2013ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಂಸತ್ ಸದಸ್ಯರ ಪ್ರದೇಶಾಭಿವೃದ್ದಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಇತ್ತೀಚೆಗೆ ಆಗುತ್ತಿರುವ ಭಾರಿ ಮಳೆಯಿಂದಾಗಿ ಭದ್ರಾವತಿ ತಾಲ್ಲೂಕಿನ ಕಾಗೆಕೋಡುಮಗ್ಗೆ ಗ್ರಾಮದಲ್ಲಿ ಕುಸಿದಿರುವ ಸೇತುವೆ ಫೋಟೋಗಳನ್ನು ವೀಕ್ಷಣೆ ಮಾಡಿದ ಸಂಸದ ಶ್ರೀ ಬಿ.ವೈ.ರಾಘವೇಂದ್ರರವರು ಕೂಡಲೇ ಇದನ್ನು ಪ್ರಕೃತಿ ವಿಕೊಪ ಪರಿಹಾರದಡಿ ದುರಸ್ತಿ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗ, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.Leave a Reply