ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ರವರ 131 ನೇ ಜನ್ಮದಿನಾಚರಣೆ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ್‌ ರಾಂರವರ 115 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಉದ್ಘಾಟಿಸಲಾಯಿತು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ .ಎಸ್. ಗುರುಮೂರ್ತಿ, ಕೆ. ರೇವಣಪ್ಪ, ಶಿಕಾರಿಪುರ ಪುರಸಭೆಯ ಅಧ್ಯಕ್ಷರಾದ ಲಕ್ಷ್ಮೀ ಮಹಾಲಿಂಗಪ್ಪ, ಗೌರವಾನ್ವಿತ ಪುರಸಭೆ ಸದಸ್ಯರು ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.Leave a Reply